ಶಿವಮೊಗ್ಗ: ಕರ್ನಾಟಕ ಯಾದವ ಸಂಘದ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಫಟಕದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಖಿಲ ಭಾರತ ಯಾದವ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ಗಣೇಶ್ ಯಾದವ್ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧ್ದಿ, ಯುವಕರ ಸಬಲೀಕರಣ ಹಾಗೂ ಸಂಘಟನಾ ಕ್ಷೇತ್ರ ಸೇರಿದಂತೆ ಅಪಾರ ಸೇವೆ ಸಲ್ಲಿಸಿರುವ ಡಿ.ಟಿ. ಶ್ರೀನಿವಾಸ್ ಅವರು ದೀರ್ಘಕಾಲದ ರಾಜಕೀಯ ಅನುಭವ, ಜನಪರ ಕಾಳಜಿ ಹಾಗೂ ಸಂಘಟನಾ ಶಕ್ತಿಯನ್ನು ಪರಿಗಣಸಿ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಹಿಂದುಳಿದ ವರ್ಗಗಳ ಧ್ವನಿಗೆ ಮತ್ತಷ್ಟು ಬಲ ಸಿಗುವುದರ ಜೊತೆಗೆ ರಾಜ್ಯದ ಅಭಿದ್ದಿಗೂ ಸಹಕಾರಯಾಗಲಿದೆ. ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳ ಪರವಾಗಿ ನಿರಂತರ ಹೋರಾಟ ನಡೆಸಿ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಸಚಿವ ಸ್ಥಾನ ನೀಡುವುದು ಸಮುದಾಯದ ಆಶಯವಾಗದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.