ಶಿವಮೊಗ್ಗ: ಜೂನ್ 09:: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ ಪ್ರದೇಶ ಹಾಗೂ ಇತರೆ ಕಾರಣಗಳಿಂದ ಸಂಭವಿಸಬಹುದಾದ ಅನಾಹುತಗಳನ್ನು ತುರ್ತಾಗಿ ನಿರ್ವಹಿಸಲು ಹಾಗೂ ಮುಂದೆ ಸಂಭವಿಸಬಹುದಾದ ಪ್ರಾಣ/ಆಸ್ತಿ ಹಾನಿಯನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಹಿಸಲು ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿ ನೌಕರರನ್ನು ಒಳಗೊಂಡ ನಿರ್ವಹಣಾ ತಂಡಗಳನ್ನು ರಚಿಸಿ, 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಸಾರ್ವಜನಿಕರು ಯಾವುದೇ ಅನಾಹುತ ಅಥವಾ ತುರ್ತು ಸಹಾಯ ಬೇಕಾದಲ್ಲಿ ಪಾಲಿಕೆಯ ಸಹಾಯವಾಣಿ ಸಂಖ್ಯೆ 1800-4257677 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಆಯುಕ್ತರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.