ಸಾಗರ ಜೂನ್ 09:): ಸಾಗರ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ.
ದಿ:01/04/1991 ರಿಂದ 31/03/2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಡಿ.ಎಸ್.ಎ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ. ವಾಹನ ಮಾಲೀಕರು ದಿನಾಂಕ: 21/06/2026 ರಿಂದ 10/07/2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ. ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸುವಂತೆ ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.