
ಶಿವಮೊಗ್ಗ,ಜೂ.11:
ಖ್ಯಾತ ಉದ್ಯಮಿ, ಶ್ರೀನಿಧಿಯ ಅಣ್ಣ, ಜನಾನುರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮೂಲಕ ಬಹುಮುಖ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿರುವ ಟಿ.ಆರ್.ಅಶ್ವಥ ನಾರಾಯಣಶೆಟ್ಟಿ ಅವರಿಗೆ ಸಿಟಿಜನ್ ಫೋರಂ ಹಾಗೂ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಅಭಿನಂದನಾ ಸಮಿತಿಯ ವತಿಯಿಂದ ಜೂ.13ರಂದು ಬೆಳಿಗ್ಗೆ 10:30ಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಹಾಗೂ ನಾಗರಿಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅಭಿನಂದನಾ ಸಮಿತಿ ಕಾರ್ಯಾಧ್ಯಕ್ಷ ಡಾ.ಪಿ.ನಾರಾಯಣ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯುಕೆ ಅಂಡ್ ಕೋ ಕಂಪನಿ ಸಂಸ್ಥಾಪಕರಾದ ಉಲ್ಲಾಸ್ ಕಾಮತ್ ಅವರು ಭಾರತದಲ್ಲಿ ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು ಮತ್ತು ಭವಿಷ್ಯ ಕುರಿತಾಗಿ ಮಾತನಾಡಲಿದ್ದಾರೆ. ಅಭಿನಂದನಾ ಸಮಿತಿ ಅಧ್ಯಕ್ಷರಾದ ಎಸ್.ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಡಿ.ಎಸ್.ಅರುಣ್, ಭೂಪಾಳಂ ಶಶಿಧರ, ಎ.ಎಂ.ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸಂಜೆ 5:30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ನಾಗರಿಕ ಅಭಿನಂದನಾ ಕಾರ್ಯಕ್ರಮವನ್ನು ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಭೀಮೇಶ್ವರ ಜೋಷಿ ಉದ್ಘಾಟಿಸಲಿದ್ದು, ವಿ.ಆರ್.ಎಲ್ ಸಮೂಹ ಸಂಸ್ಥೆಯ ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಸೇವಾಶ್ರೀ ಕಿರುಹೊತ್ತಿಗೆ ಬಿಡುಗಡೆಗೊಳಿಸಲಿದ್ದಾರೆ. ವಿಧಾನಪರಿಷತ್ತಿನ ಮಾಜಿ ಸಭಾಪತಿಗಳಾದ ಡಿ.ಹೆಚ್.ಶಂಕರಮೂರ್ತಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ್, ಡಾ.ಧನಂಜಯ ಸರ್ಜಿ, ಬಲ್ಕೀಶ್ ಬಾನು, ಮಾಜಿ ಸಂಸದರಾದ ಆಯನೂರು ಮಂಜುನಾಥ, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಅಭಿನಂದನಾ ಸಮಿತಿಯ ಗೌರವಾಧ್ಯಕ್ಷರಾದ ಎಸ್.ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಅಧ್ಯಕ್ಷರಾದ ಬಸಪ್ಪ ಗೌಡ, ಕಾರ್ಯಾಧ್ಯಕ್ಷರಾದ ಡಾ.ಪಿ.ನಾರಾಯಣ್, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ್, ಪದಾಧಿಕಾರಿಗಳಾದ ಭೂಪಾಳಂ ಶಶಿಧರ, ಸಿ.ಎಸ್.ಷಡಾಕ್ಷರಿ ಮೊದಲಾದವರು ಉಪಸ್ಥಿತರಿರುವರು ಎಂದ ಅವರು, ಕಾರ್ಯಕ್ರಮದಲ್ಲಿ ಟಿ.ಆರ್.ಅಶ್ವಥ ನಾರಾಯಣ ಶೆಟ್ಟಿ ಅವರ ಹೆಜ್ಜೆ ಗುರುತುಗಳ ಛಾಯಾಚಿತ್ರ ಪ್ರದರ್ಶನ, ಸಾಕ್ಷ ಚಿತ್ರ ಹಾಗೂ ಅಶ್ವಥ ಪಥ ಸಾಂಸ್ಕೃತಿಕ ರೂಪಕ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಸಿಟಿಜನ್ ಫೋರಂ ಅಧ್ಯಕ್ಷರಾದ ಬಸಪ್ಪಗೌಡ, ಅಭಿನಂದನಾ ಸಮಿತಿ ಪದಾಧಿಕಾರಿಗಳಾದ ಹರ್ಷ ಕಾಮತ್, ಡಾ.ಸತೀಶ್ ಕುಮಾರ್ ಶೆಟ್ಟಿ, ವೈದ್ಯನಾಥ, ಉಮೇಶ್ ಆರಾಧ್ಯ, ಸಿ.ಎಂ.ನೃಪತುಂಗ, ವಿಜಯಕುಮಾರ್, ಎಸ್.ಬಿ.ಅಶೋಕ ಕುಮಾರ್, ಕುಮಾರಶಾಸ್ತ್ರೀ ಉಪಸ್ಥಿತರಿದ್ದರು.