night police car lights in city - close-up with selective focus and bokeh background blur

ಶಿವಮೊಗ್ಗ : ನಗರದ ಗಾಂಧಿ ಬಜಾರ್ನ ಕರಿದೇವರ ಕೇರಿಯ ಒಂದನೇ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೆÇಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಪೆÇಲೀಸ್ ಠಾಣೆಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚುವರಿ ಪೆÇಲೀಸ್ ಅಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ನಿನ್ನೆ ಸಂಜೆ ಸುಮಾರು 4.45ರ ವೇಳೆಗೆ ಇಸ್ಪೀಟ್ ಅಡ್ಡೆಗೆ ಬಂದಿದ್ದ ದುಷ್ಕರ್ಮಿಗಳ ತಂಡ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರನ್ನು ಪೆÇಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಕಾನೂನು ಕ್ರಮ ಮುಂದುವರಿದಿದೆ ಎಂದು ಮೂಲಗಳು ತಿಳಿಸಿದೆ.