ಶಿವಮೊಗ್ಗ : ನಗರದಲ್ಲಿ ನೀರು, ರಸ್ತೆ, ಚರಂಡಿ, ಮಳೆ ನೀರು, ಕಸ ಇತ್ಯಾದಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜೂನ್ ೧೭ರಂದು ಬೆಳಿಗ್ಗೆ ೧೧ಗಂಟೆಗೆ ಪತ್ರಿಕಾ ಭವನದಲ್ಲಿ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಅವರೊಂದಿಗೆ ಮುಖಾಮುಖಿ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ನಾಗರಿಕರು, ಸಂಘ-ಸಂಸ್ಥೆಗಳು ಈ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರದ ಅಭಿವೃದ್ಧಿಗೆ, ಸಮಸ್ಯೆಗಳ ಪರಿಹಾರಕ್ಕೆ ಪಾಲಿಕೆ ಯೊಂದಿಗೆ ಕೈಜೋಡಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಮನವಿ ಮಾಡಿದೆ. ಅಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಯಸುವ ಸಂಘ-ಸಂಸ್ಥೆಗಳು ಮತ್ತು ನಾಗರೀಕರು ಮುಂಚಿತವಾಗಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಪ್ರಶ್ನೆಗಳು-ಸಲಹೆಗಳನ್ನು ೯೪೪೮೧೩೮೧೮೩, ೮೦೭೩೫೦೨೮೯೨, ೯೫೩೮೧೭೨೮೪೫ಗೆ ತಿಳಿಸಬೇಕು.