ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಯಲ್ಲಿ ಪ್ರವಾಸಿಗರಿಗೆನಿರ್ಬಂಧ ವಿಧಿಸಿದ್ದ ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ನಾಳೆಯಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ.
ಬೆಳಗ್ಗೆ 10 ರಿಂದ ಸಂಜೆ 05ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶವಿದೆ.
ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಹಲವು ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕೆಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ.