ಶಿವಮೊಗ್ಗ : ಕೋಮು ಸೌಹಾರ್ದ ಧಾರ್ಮಿಕ ಕೇಂದ್ರ ಹಣಗೆರೆಯ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ತಾಲ್ಲೂಕಿನ ಹಣಗೆರೆಯ ಸೈಯದ್ ಸಾದತ್ ದರ್ಗಾ, ಭೂತರಾಯ, ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದರು.
ಹಣಗೆರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಹಲವು ಸೌಕರ್ಯ ಒದಗಿಸಲಾಗುವುದು. ಕಲ್ಯಾಣಿಗೆ ಹೊಸ ಕಾಯಕಲ್ಪ ನೀಡಬೇಕಿದೆ. ಪ್ರವಾಸೋಧ್ಯಮ ಕೇಂದ್ರವಾಗಿ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಹಣಗೆರೆ ಅಭಿವೃದ್ಧಿ ಕುರಿತು ಶಾಸಕ ಆರಗ ಜ್ಞಾನೇಂದ್ರ ಸಮಗ್ರ ಪ್ರಸ್ತಾವ ಸಲ್ಲಿಸಿದ್ದಾರೆ ಎಂದರು. ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ ಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್, ಬಗರ್ಹುಕುಂ ಸಕ್ರಮ ಸಮಿತಿ ಸದಸ್ಯೆ ಪದ್ಮಾ ನವೀನ್ ಇದ್ದರು.