ಶಿವಮೊಗ್ಗ: ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ತಜ್ಞ ವೈದ್ಯರ (Anaesthetist) ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಹ್ವಾನಿಸಲಾಗಿದೆ.
ಒಂದು ವರ್ಷ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ, ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ತಜ್ಞರಿಗೆ ಸಂಭಾವನೆಯನ್ನು
ಎನ್ಹೆಚ್ಎಂ ಮಾರ್ಗಸೂಚಿಗಳನ್ವಯ ನೀಡಲಾಗುವುದು.
ಜೂನ್ 24 ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ.ನಟರಾಜ್ ಕೆ ಎಸ್ ತಿಳಿಸಿದ್ದಾರೆ.