ಜೂನ್ 23 ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವತಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60 ರಷ್ಟು ಅಂಕ ಗಳಿಸಿದವರಿಗೆ 7000/-, ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15000/- ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೆ 20000/-, ಪದವಿ ವಿದ್ಯಾರ್ಥಿಗಳಿಗೆ 25000/-, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30000/- ಹಾಗೂ ಕೃಷಿ ಎಂಜಿನಿಯರಿಂ ಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35000/- ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವುದು.