ಶಿವಮೊಗ್ಗ ಜೂ, 23) 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಸಕಲ ಸಿದ್ದತೆ ಮಾಡಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಡಿಹೆಚ್ಓ ಡಾ.ನಟರಾಜ್ ಕೆ ಎಸ್ ಮನವಿ ಮಾಡಿದರು.
ಮಂಗಳವಾರ ಮಹಾನಗರಪಾಲಿಕೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿಟಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಗರದಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ನಗರದ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಸಕ್ರಿಯವಾಗಿ ಸಹಕರಿಸಬೇಕು ಎಂದರು.

ಪೋಲಿಯೋ ಬೂತ್ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.
ನಗರ ಪ್ರದೇಶಗಳಲ್ಲಿ ಕಾರ್ಯಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜವಾಬ್ದಾರಿ ನಿರ್ವಹಿಸಬೇಕು. ಪಾಲಿಕೆ ವತಿಯಿಂದ ಐಇಸಿ ಚಟುವಟಿಕೆಗಳನ್ನು ಕೈಗೊಂಡು ಸಹಕರಿಸಬೇಕು. ನಗರದ ಮುಖ್ಯ ಭಾಗಗಳಲ್ಲಿ ಪೋಸ್ಟರ್ ಗಳು, ಬ್ಯಾನರ್ ಮತ್ತು ಕಸದ ಗಾಡಿಗಳಲ್ಲಿ ಆಡಿಯೋ ಜಿಂಗಲ್ಸ್ ಹಾಕಬೇಕೆಂದ ಅವರು ಎಲ್ಲರೂ ಕೈಜೋಡಿಸಿ ನಗರದಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಆರ್ಸಿಹೆಚ್ ಅಧಿಕಾರಿ ಡಾ.ಮಲ್ಲಪ್ಪ ಓ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬAದಿತ್ತು. ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.

ನಗರದಲ್ಲಿ 69283 ಮನೆಗಳಿಂದ 21873 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. 05 ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 115 ಬೂತ್ಗಳು ಅಂದು ಕಾರ್ಯ ನಿರ್ವಹಿಸಲಿವೆ. 464 ಲಸಿಕಾ ಕಾರ್ಯಕರ್ತರಿದ್ದು, ಬೂತ್ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29, 30 ಮತ್ತು ಜುಲೈ 1 ರಂದು ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದರು.
ಸಭೆಯಲ್ಲಿ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ಶಸ್ತçಚಿಕಿತ್ಸಕರಾದ ಡಾ.ಗೀತಾ, ಪಾಲಿಕೆ ಪರಿಸರ ಅಭಿಯಂತರರಾದ ಪ್ರಭಾಕರ್, ಡಾ.ನಾರಾಯಣ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಅಧಿಕಾರಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.