ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಲ್ಲೆಯ ಸರ್ಕಾರಿ ನೌಕರರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ದಿನಾಚರಣೆಯನ್ನು ಜೂ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕುವೆಂಪು ರಂಗಮಂದಿರಲ್ಲಿ ಹಮ್ಮಿಕೊಳ್ಳಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶೇ. ೯೦ಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಮಕ್ಕಳಿಗೆ ಕಕಳೆದ ೫ ವರ್ಷದಿಂದ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ೨ ಸಾವಿರ ರೂ ನಗದು, ಶಾಲು, ಹಾರ ಹಾಗೂ ನೆನಪಿನನ ಕಾಣಿಕೆಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಇಲ್ಲಿಯವರೆಗೆ ಸಂಘ ೨ ಕೋಟಿ ರೂ ಹೆಚ್ಚು ಖರ್ಚ ಮಾಡಿದೆ.. ಶಿವಮೊಗ್ಗದಲ್ಲಿ ಈ ಪ್ರಸಕ್ತ ವರ್ಷದ ಪತ್ರಿಭಾ ಪುರಸ್ಕಾರ ಮೊದಲನೇಯದಾಗಿದ್ದು, ಸುಮಾರು ಜಿಲ್ಲೆಯ ೪೫೦ ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ೮ ಜಿಲ್ಲೆಗಳನ್ನು ಸೇರಿಸಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅದೇ ರೀತಿ ಇನ್ನುಳಿದ ಜಿಲ್ಲೆಗಳಲ್ಲೂ ಸಹ ಈಗ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಹಾಗೂ ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ವಿನಯಾನಂದ ಸರಸ್ವತಿ ವಹಿಸಲಿದ್ದು, ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.?ಡಾಕ್ಷರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಂಎಡಿಬಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಸುಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಒಓ ಹೇಮಂತ್.ಎನ್. ಎಸ್ಪಿ ನಿಖಿಲ್.ಬಿ ಆಗಮಿಸುವರು.

ಸಂಘ ಜಿಲ್ಲಾ ಅಧ್ಯಕ್ಷ ಆರ್.ಮೋಹನ್ ಕುಮಾರ್ ಉಪಸ್ಥಿತರಿದ್ದು, ಖ್ಯಾತ ಮನೋವೈದ್ಯ ಡಾ.ಕೆ.ಎಸ್ ಪವಿತ್ರ ಆರೋಗ್ಯ ಮತ್ತು ಮಹಿಳಾ ಕಲ್ಯಾಣ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ವೇದಿಕೆ ಕಾರ್ಯಕ್ರಮದ ನಂತರ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯ ನಟ ರಾಘವೇಂದ್ರ ಕೆ.ಆರ್ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಡ ಚಿಲ್ಲರ್ ಮಂಜು ಇವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆರ್.ಮೋಹನ್ ಕುಮಾರ್, ಆರ್.ಪಾಪಣ್ಣ, ಎನ್.ಎಂ.ರಂಗನಾಥ್, ಎಸ್.ಆರ್.ನರಸಿಂಹ ಮೂರ್ತಿ, ಎಂ.ರವಿ, ಜಿ.ಎಂ.ದಿನೇಶ್, ಸಿದ್ದಬಸಪ್ಪ.ಬಿ, ಸುಮತಿ.ಜಿ ಇದ್ದರು.
ಜು.೧೧ರಂದು ಒಪಿಎಸ್ ಗೆ ಹಕ್ಕೊತ್ತಾಯ.
ರಾಜ್ಯ ಸಂಘದ ಚುನಾವಣೆ ಸಂದರ್ಭದಲ್ಲಿ ನೌಕರರ ಸಂಘದ ಸದಸ್ಯರ ಮಕ್ಕಳಿಗೆ ಎ? ಖರ್ಚಾದರೂ ಪ್ರತಿಭಾ ಪುರಸ್ಕಾರ ಮಾಡೇ ತೀರುತ್ತೇನೆ ಎಂದಿದ್ದೆ. ಅದೇ ರೀತಿ ನೌಕರರಿಗೆ ಹಳೆ ಪಿಂಚಣಿ (ಒಪಿಎಸ್) ವ್ಯವಸ್ಥೆ ಜಾರಿ ಮಾಡಿಸಿಯೇ ಸಿದ್ಧ ಎಂದು ಘೋ?ಣೆ ಮಾಡಿದ್ದೆ. ಅದಕ್ಕಾಗಿ ಮತದಾರರು ನನ್ನ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಿದ್ದಾರೆ. ಆ ನಿಟ್ಟಿನಲ್ಲಿ ಪ್ರಯತ್ನ ನಡಯುತ್ತಿದೆ. ಮುಖ್ಯ ಮಂತ್ರಿಗಳೂ ಬದಲಾಗಿದ್ದಾರೆ. ಜುಲೈ ೧೧ರಂದು ಬೆಂಗಳೂರಿನಲ್ಲಿ ಸಂಘದ ಬೃಹತ್ ಸಮಾವೇಶ ಆಯೋಜಿಸಿದ್ದೇವೆ. ಅಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿ ಒಪಿಎಸ್ ಗೆ ಹಕ್ಕೊತ್ತಾಯ ಮಾಡಲಿದ್ದೇವೆ. ಸಿಎಂ ಸ್ಪಂದಿಸುವರೆಂಬ ಆಶಾಭಾವನೆ ಇದೆ. ಗುರಿಮುಟ್ಟುವ ಅಚಲ ವಿಶ್ವಾಸವಿದೆ.
.ಸಿ.ಎಸ್.ಷಡಾಕ್ಷರಿ