ಶಿವಮೊಗ್ಗ : ಜೂನ್ ೨೮ : ( : ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಕುಂಸಿ, ಯಡೇಹಳ್ಳಿ ಸಮೀಪದಲ್ಲಿ ತಲಾ ೬೦ಕೋ.ರೂ.ಗಳ ಅಂದಾಜು ವೆಚ್ಚದಲ್ಲಿ, ಹೊಸೂರು, ತಾಳಗುಪ್ಪ ಮತ್ತು ನಗರದ ಬೊಮ್ಮನಕಟ್ಟೆ ಪ್ರದೇಶಗಳಲ್ಲಿ ತಲಾ ೭೦ಕೋ.ರೂ.ಗಳ ಅಂದಾಜು ವೆಚ್ಚದಲ್ಲಿ ಹಾಗೂ ಗುಂಡಪ್ಪಶೆಡ್ನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಪ್ರಾರಂಭಿಸಲು ೩೦೦ಕೋ. ರೂ.ವೆಚ್ಚದ ಒಟ್ಟು ೦೭ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಅಗತ್ಯವಿರುವ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿವೆ ಎಂದು ಸಾಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಇಂದು ಶಿವಮೊಗ್ಗದ ವಿದ್ಯಾನಗರದ ಮೇಲ್ಸೇತುವೆಗೆ ಹೊಂದಿಕೊಂಡಂತಿರುವ ರೈಲ್ವೇ ಇಲಾಖೆಯ ವಿಶಾಲವಾದ ಜಾಗದಲ್ಲಿ ವಿದ್ಯಾನಗರ, ಚಿಕ್ಕಲ್, ಶಾಂತಮ್ಮ ಲೇಔಟ್, ಅರಕೇಶ್ವರ ದೇವಸ್ತಾನ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಗಂಧದ ಕಾರ್ಖಾನೆಗಳಿಗೆ ಸಂಚರಿಸಲು ಲಘುವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಂದಾಜು ೩.೦೦ಕೋ. ರೂ.ಗಳ ವೆಚ್ಚದಲ್ಲಿ ಅಂಡರ್ಪಾಸ್ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಇದೇ ಸ್ತಳದಲ್ಲಿ ಈಗಾಗಲೇ ೪೩.೯೦ಕೋ. ವೆಚ್ಚದ ಟ್ರಂಪೆಟ್ಕರ್ವ್ಮೇಲ್ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದವರು ನುಡಿದರು.

ಆಡಳಿತಾರೂಢ ಕೇಂದ್ರ ಸರ್ಕಾರದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ಗಡ್ಕರಿಯವರ ಸಹಕಾರದೊಂದಿಗೆ ರಾಷ್ಟ್ರದ ಹೆದ್ದಾರಿಗಳು ಹಾಗೂ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ರವರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಹೊಸ ರೈಲು ಸಂಪರ್ಕಗಳ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ ಎಂದ ಅವರು, ಅನೇಕ ವಿಶೇಷ ಪ್ರಯತ್ನಗಳ ಫಲವಾಗಿ ಈವರೆಗೆ ಸುಮಾರು ೨೦ಸಾವಿರ ಕೋಟಿಗೂ ಅಧಿಕ ವೆಚ್ಚದ ಹೆದ್ದಾರಿ ಮತ್ತು ರೈಲ್ವೇ ಕಾಮಗಾರಿಗಳಿಗೆ ಅನುದಾನ ದೊರಕಿದ್ದು, ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದರು.
ಕ್ಷೇತ್ರದ ಹೆದ್ದಾರಿಗಳಲ್ಲಿರುವ ಎಲ್ಲಾ ರೈಲ್ವೇ ಗೇಟ್ಲೆವೆಲ್ಕ್ರಾಸಿಂಗ್ಗಳ ಬದಲಾಗಿ ಮೇಲ್ಸೇತುವೆ ಮತ್ತು ಅಂಡರ್ಪಾಸ್ಗಳನ್ನು ನಿರ್ಮಿಸಿ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ವಿಶೇಷ ಗಮನಹರಿಸಲಾಗಿದೆ. ಈಗಾಗಲೇ ಆರಂಭಿಸಲಾಗಿದ್ದ ವಿದ್ಯಾನಗರದ ವೃತ್ತಾಕಾರದ ಮೇಲ್ಸೇತುವೆ, ಸವಳಂಗರಸ್ತೆಯ ಮೇಲ್ಸೇತುವೆ ಮತ್ತು ಅಂಡರ್ಪಾಸ್, ಸೋಮಿನಕೊಪ್ಪ ರಸ್ತೆಯಲ್ಲಿ ಮೇಲ್ಸೇತುವೆ, ಪಿ.ಅಂಡ್ಟಿ.ಕಾಲೋನಿಯಲ್ಲಿ ಅಂಡರ್ಪಾಸ್ಮತ್ತು ಭದ್ರಾವತಿ ಸಮೀಪದ ಕಡದಕಟ್ಟೆ ಬಳಿ ಮೇಲ್ಸೇತುವೆ ನಿರ್ಮೀಸಿ ಲೋಕಾರ್ಪಣೆಗೊಳಿಸಲಾಗಿರುವುದು ಅತ್ಯಂತ ಹರ್ಷದ ಸಂಗತಿಯಾಗಿದೆ ಎಂದರು.

ಅಂತೆಯೇ ಎಂ.ಆರ್.ಎಸ್.ಸರ್ಕಲ್ನಿಂದ ರಿಂಗ್ರೋಡ್ನವರೆಗೆ ಒಂದು ಬಾರಿ ಅಭಿವೃಧ್ಧಿಗೊಳಿಸಿ ನಿರ್ವಹಿಸಲು ಹಾಗೂ ಎಂ.ಆರ್.ಎಸ್ನಿಂದ ಬಸ್ನಿಲ್ದಾಣದವರೆಗೆ ಹಾಗೂ ನಗರದ ವಿವಿಧ ೦೪ಪ್ರಮುಖ ವೃತ್ತಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಭಾರೀ ಮೊತ್ತದ ಬಿಡುಗಡೆಗೊಳಿಸಿ, ಅಭಿವೃದ್ದಿ ಕಾರ್ಯಕ್ಕೆ ಸಹಕರಿಸಿದ ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದೀಜಿಯವರು, ಕೇಂದ್ರ ಭೂಸಾರಿಗೆ ಸಚಿವ ನಿತಿನ್ಗಡ್ಕರಿಯವರು ಹಾಗೂ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರವರು ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಅಭಿನಂದನಾರ್ಹರು ಎಂದರು.

- ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಸಂಸದ ಬಿ.ವೈ.ರಾಘವೇಂದ್ರ ಅವರು ಮುಂದುವರೆದು ಜಿಲ್ಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮುಂದುವರೆಸುತ್ತಿರುವುದು ಪಕ್ಷಾತೀತವಾಗಿ ಎಲ್ಲರೂ ಸ್ವಾಗತಿಸುವಂತಹದ್ದು, ಅದಕ್ಕಾಗಿ ನಾನು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಅಭಿನಂದಿಸುತ್ತೇನೆ. ನಿರೀಕ್ಷಿತ ಕೆಲಸ-ಕಾರ್ಯಗಳನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ನಡೆಸಿ, ಲೋಕಾರ್ಪಣೆಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿರುವುದು ಅತ್ಯಂತ ಸಂತಸ ತಂದಿದೆ.
- ಶ್ರೀಮತಿ ಬಲ್ಕೀಸ್ಬಾನು, ವಿಧಾನ ಪರಿಷತ್ಸದಸ್ಯರು, ಶಿವಮೊಗ್ಗ,
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ಸದಸ್ಯ ಡಿ.ಎಸ್.ಅರುಣ್ಅವರು ಮಾತನಾಡಿ, ಶಿವಮೊಗ್ಗ ನಗರದ ವಿಕಾಸಕ್ಕೆ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ, ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಬೃಹತ್ನಗರವಾಗಿ ಅಭಿವೃದ್ಧಿಗೊಂಡಂತಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮಾತನಾಡಿ, ಕೈಗೊಳ್ಳುತ್ತಿರುವ ರೈಲ್ವೇ ಅಂಡರ್ಪಾಸ್ಕಾಮಗಾರಿಯು ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಹಾಗೂ ಮಳೆಗಾಲದಲ್ಲಿ ನೀರು ನಿಲ್ಲದಂತೆ ವಿನ್ಯಾಸಗೊಳಿಸಿ, ಲಘುವಾಹನಗಳು ಮತ್ತು ಪಾದಚಾರಿಗಳಿಗೆ ಅನುಕೂಲವಾಗುವಂತೆ ಕೆಳಸೇತುವೆ ನಿರ್ಮಿಸಲಾಗುತ್ತಿದೆ. ಇದರಿಂದಾಗಿ ಈಭಾಗದ ನಿವಾಸಿಗಳಲ್ಲಿ ಸಂತಸ ಮನೆ ಮಾಡಿದೆ. ಈ ಭಾಗದ ಎಲ್ಲಾ ನಿವಾಸಿಗಳ ಕೋರಿಕೆಯನ್ನು ಆಲಿಸಿ, ಕಾಮಗಾರಿ ಕೈಗೊಳ್ಳುವಲ್ಲಿ ಸಹಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ನಗರದ ನಾಗರೀಕರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖಂಡ ಜಗದೀಶ್, ಶ್ರೀಮತಿ ಯಮುನಾರಂಗೇಗೌಡ, ಜ್ಞಾನೇಶ್ವರ್, ಶ್ರೀಮತಿ ಸುರೇಖಾ ಮುರಳೀಧರ್, ಮೋಹನರೆಡ್ಡಿ ಸೇರಿದಂತೆ ಹಲವು ಗಣ್ಯರು ಹಾಗೂ ರೈಲ್ವೇ ಇಲಾಖಾ ಅಧಿಕಾರಿ-ಸಿಬ್ಬಂಧಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.