ಶಿವಮೊಗ್ಗ : ಪಂಪ ಹೌಸ್ ನಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಶಿವಮೊಗ್ಗ ನಗರದಲ್ಲಿ ಅನೇಕ ವಾರ್ಡ್ ಗ ಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಕುಡಿಯುವ ನೀರಿಗಾಗಿ ಜನರು ಪರಿತಪಿಸುವ ಹಂತಕ್ಕೆ ತಲುಪಿದ್ದಾರೆ ಎಂದು ಶಿವಮೊಗ್ಗ ನಗರದ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ

ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕುಡಿಯುವ ನೀರಿನ ಸರಬರಾಜುಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕುಡಿಯುವ ನೀರಿಗೆ ಸಮಸ್ಯೆ ಇರುವ ಕಡೆ, ಖಾಸಗಿ ಟ್ಯಾಂಕರ್ ಗಳ ಮೂಲಕ ಕೂಡಲೇ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಬಿ ಎಲ್ ಒ ಗಳು ಮನೆ ಮನೆಗೆ ಭೇಟಿ ನೀಡಿ ಅನುಮಾನ ವಿತರಿಸಲು ಕಟ್ಟುನಿಟ್ಟಾಗಿ ಸೂಚಿಸಬೇಕೆಂಬ ವಿಧಾನ ಪರಿಷತ್ ಶಾಸಕರ ಒತ್ತಾಯಕ್ಕೆ ಉತ್ತರವಾಗಿ ಜಿಲ್ಲಾಧಿಕಾರಿಗಳು ಅದನ್ನು ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ತಿಳಿಸಿದರು.