ನೀಟ್ ಪರೀಕ್ಷಾ ವೈಫಲ್ಯ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ 19 ದಿನದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಆರೋಗ್ಯದಲ್ಲಿ ಹಸ್ತವ್ಯಸ್ತವಾಗಿದ್ದು “ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯವಾದದ್ದು” ಈಗಾಗಲೇ ದೇಶಾದ್ಯಂತ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು , ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ವಿನೂತನ ರೀತಿಯ ಬೃಹತ್ ಹೋರಾಟಗಳನ್ನು ನಡೆಸುತ್ತಿದ್ದು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಕಂಗೆಟ್ಟು ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು. ಕೇಂದ್ರ ಬಿಜೆಪಿ ಸರ್ಕಾರದ ಪ್ರಧಾನ ಮಂತ್ರಿಗಳು, ಕೇಂದ್ರ ಗೃಹ ಸಚಿವರು, ಶಿಕ್ಷಣ ಸಚಿವರು ಮಾನವೀಯ ದೃಷ್ಟಿಯಿಂದಲೂ ಸಹ ವಿದ್ಯಾರ್ಥಿಗಳ ಸಾವಿಗೆ ಯಾವುದೇ ಪರಿಹಾರವನ್ನು ನೀಡದೆ ಬಂಡತನವನ್ನು ಪ್ರದರ್ಶಿಸುತ್ತಿರುವುದು. ಸಂವಿಧಾನ ವಿರೋಧಿ, ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ

ಈಗಾಗಲೇ ಸಾಮಾಜಿಕ ಕಾರ್ಯಕರ್ತರ ಹಾಗೂ ವಿದ್ಯಾರ್ಥಿ ಮಿತ್ರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು-ಗಡುತ್ತಿರುವ ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಬದಲಾಗಬೇಕು

ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿರುವ ಸಾಮಾಜಿಕ ಕಾರ್ಯಕರ್ತ ಸೋನಂ ಜೀವ ರಕ್ಷಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಈಗಾಗಲೇ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಾಮಾಜಿಕ ಹೋರಾಟಗಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿಚಾರವಾಗಿ ಅವರ ಆರೋಗ್ಯದ ಏರುಪೇರುಗಳ ಬಗ್ಗೆ ಕಳವಳ ವ್ಯಕ್ತಪಡಿಸಿ,ಹೋರಾಟಗರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಆದೇಶಿಸಿದೆ

ಕೇಂದ್ರ ಬಿಜೆಪಿ ಸರ್ಕಾರ ಇದೇ ರೀತಿ ಬಂಡತನವನ್ನು ಪ್ರದರ್ಶಿಸಿದರೆ ದೇಶಾದ್ಯಂತ ವಿದ್ಯಾರ್ಥಿಗಳ, ಸಾಮಾಜಿಕ ಹೋರಾಟಗಾರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ನಾಗರಿಕ ಬಂಧುಗಳು ರಸ್ತೆಗಿಳಿದು ಹೋರಾಟ ನಡೆಸುವುದು ಅನಿವಾರ್ಯ