ಶಿವಮೊಗ್ಗ, ಜು. 18:
ಮಾಜಿ ಪ್ರಧಾನಿ .ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಜೆಡಿಎಸ್ ನಾಯಕ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕೆ ಪ್ರಕಟಣೆ ನೀಡಿರುವ ಅವರು, “ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳಿಗೆ ಹೆಸರಾಗಿದ್ದ ಮಹನೀಯರು. ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಅವರನ್ನು ಗೌರವಿಸುತ್ತಿದ್ದ ಸಾವಿರಾರು ಅಭಿಮಾನಿಗಳಿಗೆ ಅಪಾರ ದುಃಖವನ್ನುಂಟು ಮಾಡಿದೆ” ಎಂದು ತಿಳಿಸಿದ್ದಾರೆ.

“ಪರಮಾತ್ಮನು ದಿವಂಗತ ಚೆನ್ನಮ್ಮ ದೇವೇಗೌಡ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.

ದೇವೇಗೌಡರ ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ” ಎಂದು ಅವರು ಪ್ರಾರ್ಥಿಸಿದ್ದಾರೆ.

ಕೊನೆಯಲ್ಲಿ ದಿವಂಗತರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.