ಶಿವಮೊಗ್ಗ :19
ಮಾಜಿ ಪ್ರಧಾನಿ ಜೆಡಿಎಸ್ ನಾಯಕ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಸಂತಾಪ ಸೂಚಿಸಿದ್ದಾರೆ.

ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡಿದ್ದ ಚೆನ್ನಮ್ಮ ದೇವೇಗೌಡ ಅವರು ಎಲ್ಲರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲ, ರಾಜ್ಯದ ಜನತೆಗೆ ಕೂಡ ಅಪಾರ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಭಗವಂತನು ಶ್ರೀಮತಿ ಚೆನ್ನಮ್ಮ ದೇವೆಗೌಡರ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಮಾಜಿ ಪ್ರಧಾನಿ ದೇವೆಗೌಡರ ಕುಟುಂಬದವರಿಗೆ ಕರುಣಿಸಲಿ ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.