ಜು.೨೨:
ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ (ಎಸ್ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿ ದ್ದಾರೆ. ಸ್ನೇಹಪರ ವ್ಯಕ್ತಿತ್ವದಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಮಂಜುನಾಥ್ ಅವರ ಅಕಾಲಿಕ ನಿಧನವು ಪೊಲೀಸ್ ಇಲಾಖೆಗೆ ತೀವ್ರ ಆಘಾತ ಉಂಟುಮಾಡಿದೆ. ಮೃತರು ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಂಜುನಾಥ್ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ವಿನೋಬನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.