ಹೊಸನಗರ : ಪತ್ರಿಕೆಗಳ ಓದು ಸಮಾಜದಲ್ಲಿ ಚಿಂತನಾಶಕ್ತಿಯನ್ನು ಬೆಳೆಸುತ್ತದೆ. ಡಿಜಿಟಲ್ ಯುಗದಲ್ಲೂ ಪತ್ರಿಕೋದ್ಯಮದ ಮೂಲ ಉದ್ದೇಶ ಬದಲಾಗುವುದಿಲ್ಲ ಎಂದು ತಹಶೀಲ್ದಾರ್ ಭರತ್ರಾಜ್ ಹೇಳಿದರು.
ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲ್ಲೂಕು ಶಾಖೆ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಮಹತ್ವ ಮತ್ತು ಕಾಲಘಟ್ಟಕ್ಕೆ ತಕ್ಕಂತೆ ಅದರಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಮಾತನಾಡಿದರು.
ಪತ್ರಿಕೆಗಳ ಓದುವಿಕೆಯು ಸಮಾಜದಲ್ಲಿ ಚಿಂತನಾ ಶಕ್ತಿಯನ್ನು ಬೆಳೆಸುತ್ತದೆ. ಪತ್ರಿಕೆ ಓದುಗರ ಸಂಖ್ಯೆ ಇಳಿಮುಖ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾದ ಬಳಕೆ ಹೆಚ್ಚಾದ ಕಾರಣ ಪತ್ರಿಕೆ ಓದುಗರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಅವರು, ಆದರೆ ಸೋಶಿಯಲ್ ಮೀಡಿಯಾದ ಲಾಭವೆಂದರೆ ಯಾವುದೇ ಘಟನೆ ನಡೆದ ಅರ್ಧ ಗಂಟೆಯಲ್ಲೇ ತಕ್ಷಣದ ಅಪ್ಡೇಟ್ಗಳು ಜನರಿಗೆ ತಲುಪುತ್ತವೆ” ಎಂದು ತಿಳಿಸಿದರು.

ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗುತ್ತಿದೆ ಪತ್ರಿಕಾರಂಗ ಕಾಲ ಬದಲಾದಂತೆ ಪತ್ರಿಕಾರಂಗ ಮತ್ತು ಮಾಧ್ಯಮಗಳು ಕೂಡ ಹೊಸ ತಂತ್ರಜ್ಞಾನಕ್ಕೆ ತಕ್ಕಂತೆ ಅಪ್ಡೇಟ್ ಆಗುತ್ತಿವೆ. ಆದರೆ ಎಷ್ಟೇ ಬದಲಾವಣೆಗಳಾದರೂ ಪತ್ರಿಕೋದ್ಯಮದ ಮೂಲ ಉದ್ದೇಶ ಮತ್ತು ಪ್ರಾಮುಖ್ಯತೆ ಮಾತ್ರ ಬದಲಾಗುವುದಿಲ್ಲ ಎಂದರು.

ಲೇಖಕರು ಮತ್ತು ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವುದಕ್ಕಷ್ಟೇ ಸೀಮಿತವಾಗದೆ, ಅನ್ಯಾಯದ ವಿರುದ್ಧ ಕಂಟಕವಾಗಿ ನಿಂತು ಸರ್ಕಾರದ ನೀತಿಗಳನ್ನು ಜನಸಾಮಾನ್ಯರ ಹಾಗೂ ರೈತರ ಪರವಾಗಿ ಬದಲಾಯಿಸುವ ಮಹತ್ತರ ಶಕ್ತಿಯಾಗಿ ಕೆಲಸ ಮಾಡಿವೆ” ಎಂದು ಅವರು ಹೇಳಿದರು.
ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ರಮ ಆಯೋಜಿಸಿದ ಸಂಘದ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಅವರು, ಈ ಸಂದರ್ಭದಲ್ಲಿ ಸನ್ಮಾನಗೊಳ್ಳುತ್ತಿರುವ ಸಾಧಕರಿಗೆ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ನಾ. ರವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಯುಡಬ್ಲ್ಯೂಜೆ ರಾಜ್ಯ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಹುಚ್ರಾಯಪ್ಪ, ಟಿ. ಸತ್ಯನಾರಾಯಣಪ್ಪ, ಜಿಲ್ಲಾ ಸಮಿತಿ ನಿರ್ದೇಶಕ ರವಿ ಬಿದನೂರು, ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಚಿದಾನಂದ, ಕೆಯುಡಬ್ಲ್ಯೂಜೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಶ್ವಿನಿ ಪಂಡಿತ್ ಉಪಸ್ಥಿತರಿದ್ದರು.