ಶಿವಮೊಗ್ಗ,ಆ.07:
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ವಿಧಾನ ಪರಿಷತ್ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಡಿ.ಎಸ್. ಅರುಣ್ ಅವರು ಸೇರಿದಂತೆ 17 ಸದಸ್ಯರ ನಿಯೋಗವು ನವದೆಹಲಿಯ ಪ್ರತಿಷ್ಠಿತ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಭವನದ ಐತಿಹಾಸಿಕ ಹಿನ್ನೆಲೆ, ವಾಸ್ತುಶಿಲ್ಪದ ವೈಶಿಷ್ಟ್ಯ ಹಾಗೂ ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯ ಕಾರ್ಯವೈಖರಿಯ ಕುರಿತು ಮಾಹಿತಿ ಪಡೆದು, ಭಾರತದ ಪ್ರಜಾಪ್ರಭುತ್ವದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಪತಿ ಭವನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್, ಮಾಜಿ ಅಧ್ಯಕ್ಷರಾದ ಡಿ.ಎಂ. ಶಂಕರಪ್ಪ, ವಾಸುದೇವ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನಿಯೋಗದ ಸದಸ್ಯರು ಉಪಸ್ಥಿತರಿದ್ದರು.
