ಶಿವಮೊಗ್ಗ, ಆ, 07(ಕರ್ನಾಟಕ ವಾರ್ತೆ) ಶಾಲೆ ತೊರೆದ, ಶಾಲಾ-ಕಾಲೇಜಿಗೆ ಗೈರಾಗುವ ಹೆಣ್ಣುಮಕ್ಕಳ ಮೇಲೆ ನಿಗಾ ಇರಿಸಿ ಹಾಗೂ ಬಾಲ್ಯ ವಿವಾಹದಲ್ಲಿ ಪಾಲ್ಗೊಳ್ಳುವ, ನೆರವಾಗುವವರ ವಿರುದ್ದ ಪ್ರಕರಣ ದಾಖಲಿಸುವ ಮೂಲಕ ಬಾಲ್ಯ ವಿವಾಹವನ್ನು ತಡೆಗಟ್ಟಲು ಎಲ್ಲ ಅಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಮನ್ವಯ ಸಮಿತಿ ಸಭೆ ಮತ್ತು ಮಕ್ಕಳ ರಕ್ಷಣಾ ಘಟಕದ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಜುನಾಥ್ ಮಾತನಾಡಿ, 2026-27 ನೇ ಸಾಲಿನಲ್ಲಿ ಏಪ್ರಿಲ್ನಿಂದ ಜೂನ್ವರೆಗೆ 61 ಪೋಕ್ಸೋ, 18 ಪೋಕ್ಸೋ ಮತ್ತು ಬಾಲ್ಯ ವಿವಾಹ ಸೇರಿ ಒಟ್ಟು 79 ಪ್ರಕರಣಗಳು ದಾಖಲಾಗಿವೆ. 12 ಬಾಲ್ಯ ವಿವಾಹ ತಡೆಗಟ್ಟಲಾಗಿದೆ ಮತ್ತು ಜಿಲ್ಲೆಯಲ್ಲಿ 23 ಬಾಲ ಗರ್ಭಿಣಿಯರ ಪ್ರಕರಣ ದಾಖಲಾಗಿದ್ದು ಎಲ್ಲ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು, ಶಾಲಾ-ಕಾಲೇಜಿಗೆ ಸತತವಾಗಿ ಗೈರಾಗುವ, ಶಾಲೆ ತೊರೆದ ಹೆಣ್ಣುಮಕ್ಕಳ ಮತ್ತು ಬಾಲ್ಯ ವಿವಾಹ ನಡೆಯುವ ಸಂಭವ ಇರುವ ಕುಟುಂಬಗಳ ಮೇಲೆ ನಿಗಾ ಇರಿಸಬೇಕು.
ಗ್ರಾಮ ಸಭೆಗಳು, ಇತರೆ ಸಭೆಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹಕ್ಕೆ ಪ್ರಚೋಚನೆ ನೀಡುವ, ನೆರವಾಗುವ, ಭಾಗಿಯಾಗುವ ಎಲ್ಲರ ಮೇಲೆ ಎಫ್ಐ ಆರ್ ದಾಖಲಿಸಬೇಕು.
ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಬಾಲ್ಯ ವಿವಾಹ ತಡೆ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಿ, ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು.
ಮಕ್ಕಳ ಸಹಾಯವಾಣಿ 1098 ಮತ್ತು 112 ಸಹಾವಾಣಿ ಕುರಿತು ಸಾರ್ವಜನಿಕರಲ್ಲಿ ವಿಶೇಷವಾಗಿ ಗ್ರಾಮಿಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹುಡುಗ ಹುಡುಗಿ ಪೋಷಕರಿಗೆ ತಿಳಿಯದಂತೆ ಮನೆಯಿಂದ ಹೋಡಿ ಹೋದ ಪ್ರಕರಣಗಳೇ ಹೆಚ್ಚಿರುವ ಕಾರಣ ಈ ಮಕ್ಕಳ ವರದಿ ನೀಡುವಂತೆ ಹಾಗೂ ಪ್ರಕರಣಗಳು ನಡೆಯದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ ಸಿಇಓ ಹೇಮಂತ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 2,563 ಅಂಗನವಾಡಿ ಕೇಂದ್ರಗಳು 460 ನಗರ ಭಾಗದಲ್ಲಿ 2,103 ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿವೆ. 231 ನಗರ, 1,837 ಗ್ರಾಮೀಣ ಭಾಗದಲ್ಲಿ ಒಟ್ಟು 2,068 ಸ್ವಂತ ಕಟ್ಟಡದಲ್ಲಿವೆ.

ನಗರದಲ್ಲಿ 172, ಗ್ರಾಮೀಣ ಭಾಗದಲ್ಲಿ 65 ಸೇರಿ ಒಟ್ಟು 237 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಲಭ್ಯವಿರುವುದಿಲ್ಲ. ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಜಾಗ ಗುರುತಿಸಿ ಸಿಡಿಪಿಓ ಗಳು ವರದಿ ನೀಡಬೇಕು. ಹಾಗೂ ಶಿಥಿಲಗೊಂಡಿರುವ ಕಟ್ಟಡಗಳ ವಿವರ ನೀಡಬೇಕೆಂದು ಸೂಚನೆ ನೀಡಿದರು.
ಅಮೃತ ನಗರೋತ್ಥಾನ ಯೋಜನೆಯಡಿ ಅಂಗನವಾಡಿ ಕೇಂದ್ರ ಕಟ್ಟಡಗಳ ಕಾಮಗಾರಿಗೆ ಸಂಬAಧಿಸಿದAತೆ ಭದ್ರಾವತಿಯಲ್ಲಿ ಕೆಲಸ ಪ್ರಾರಂಭವಾಗಿಲ್ಲ. ಇಲ್ಲಿ ಮರು ಟೆಂಡರ್ ಕರೆದು ಬೇಗ ಕೆಲಸ ಆರಂಭಿಸಬೇಕು. ಇನ್ನುಳಿದ ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಗಳನ್ನು ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸವುಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸಾಧಾರಣ ಅಪೌಷ್ಟಿಕತೆಯಿಂದ 1037 ಮತ್ತು ತೀವ್ರ ಅಪೌಷ್ಟಿಕತೆಯಿಂದ 52 ಮಕ್ಕಳು ಬಳಲುತ್ತಿದ್ದು, ಈ 52 ಮಕ್ಕಳನ್ನು ಎನ್ಆರ್ಸಿ ಯಲ್ಲಿ ಸೂಕ್ತ ಚಿಕಿತ್ಸೆ ಮತ್ತು ಪೌಷ್ಟಿಕ ಆಹಾರ ನಿಡಬೇಕು. ಎನ್ಆರ್ಸಿ ಗೆ ಬರದ ಮಕ್ಕಳ ಮನೆಗೆ ಆಶಾ ಕಾರ್ಯಕರ್ತೆಯರು ಪ್ರತಿ ಮೂರು ದಿನಕ್ಕೊಮ್ಮೆ ಭೇಟಿ ನೀಡಿ ಮಗು ಪೌಷ್ಟಿಕ ಆಹಾರ ತೆಗೆದುಕೊಳ್ಳುತ್ತಿರುವ ಬಗ್ಗೆ ಪರಿಶೀಲಿಸಬೇಕೆಂದು ಸೂಚನೆ ನೀಡಿದರು.
ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಶೇ.100 ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು, ವರದಕ್ಷಿಣೆ ನಿಷೇಧ ಕಾಯ್ದೆ-1961 ರಡಿ ಜಿಲ್ಲೆಯಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 14 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗಿವೆ. ಪ್ರಸ್ತುತ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣಗಳಿಗೆ ಸಂಬAಧಿಸಿದAತೆ ಸೂಕ್ತ ಕ್ರಮ ಕೈಗೊಂಡು ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದರು.

ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ (2006ರ ವರದಿ): ಈ ವರೆಗೆ ಸಾಗಾಣಿಕೆಗೆ ಒಳಪಟ್ಟ 3 ಮಹಿಳೆಯರನ್ನು ರಕ್ಷಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಸಾಗಾಣಿಕೆಗೆ ಕಾರಣರಾದವರ ವಿರುದ್ಧ 3 ಪ್ರಕರಣಗಳನ್ನು ದಾಖಲಿಸಲಾಗಿದೆ. ಅನೈತಿಕ ಸಾಗಾಣಿಕೆ ತಡೆಗಟ್ಟಲು ಗ್ರಾಮೀಣ ಮತ್ತು ತಾಲೂಕು ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ 262 ಕಾವಲು ಸಮಿತಿಗಳು ರಚನೆಯಾಗಿದ್ದು, ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸಿ ಕ್ರಮ ವಹಿಸಬೇಕು ಎಂದರು.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಗರ್ಭಿಣಿಯರಿಗೆ ರೂ.5,000 ಧನಸಹಾಯ 1,867 ಗುರಿಗೆ ಪ್ರತಿಯಾಗಿ 1,912 ಸಾಧನೆಯಾಗಿದ್ದು, ಶೇ. 102 ರಷ್ಟು ಭೌತಿಕ ಪ್ರಗತಿ ಸಾಧಿಸಲಾಗಿದೆ.
ಎರಡನೇ ಮಗು ಹೆಣ್ಣು ಮಗುವಿಗೆ ರೂ.6,000 ಧನಸಹಾಯ: 738 ಗುರಿಗೆ ಪ್ರತಿಯಾಗಿ 652 ಸಾಧನೆಯಾಗಿದ್ದು, ಶೇ. 88 ರಷ್ಟು ಪ್ರಗತಿ ದಾಖಲಾಗಿದ್ದು, ಶೇ 100% ಗುರಿ ಸಾಧಿಸಲು ಸೂಚನೆ ನೀಡಿದರು.
ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ, ಸಾಂತ್ವನ ಯೋಜನೆಯಡಿ ದಾಖಲಾಗಿ ಬಾಕಿ ಇರುವ ಪ್ರಕರಣಗಳಲ್ಲಿ ಶೀಘ್ರದಲ್ಲೇ ಇತ್ಯರ್ಥಡಿಸುವಂತೆ ಹಾಗೂ ಒನ್ ಸ್ಟಾಪ್ ಸಖಿ ಕೇಂದ್ರದ ಸಮರ್ಪಕ ನಿರ್ವಹಣೆ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳಿಗೆ ಸಂಬAಧಿಸಿದ ಪ್ರಕರಣಗಳನ್ನು ಆದ್ಯತೆ ಮೇಲೆ ನಿರ್ವಹಿಸಬೇಕು ಹಾಗೂ ಇವರ ವಿರುದ್ದ ಅಪರಾಧಗಳು ನಡೆಯದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.