ಶಿವಮೊಗ್ಗ,ಆ.12:
ಆಗುಂಬೆ ಪೊಲೀಸ್ ಠಾಣೆ ಮುಖ್ಯ ಪೇದೆ, ಭದ್ರಾವತಿ ತಾಲ್ಲೂಕು ಆನವೇರಿ ಗ್ರಾಮದ
ಮೂಲದ ನಿವಾಸಿ ಡಿ.ಶಿವಣ್ಣ (52) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.

ಕಳೆದ ವಾರ ಕರ್ತವ್ಯದಲ್ಲಿದ್ದಾಗ ಶಿವಣ್ಣ ಅಸ್ವಸ್ಥಗೊಂಡು ತಲೆ ಸುತ್ತಿ ಬಿದ್ದಿದ್ದರು. ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಅವರ ಪಾರ್ಥಿವ ಶರೀರವನ್ನು ಆನವೇರಿ ಗ್ರಾಮಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಒದಗಿಸಲಾಗಿತ್ತು. ಜಿಲ್ಲಾ ಪೊಲೀಸ್ ತಂಡ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಗೌರವ ನಮನ ಸಲ್ಲಿಸಿತು.

ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

20 ವರ್ಷಗಳ ಸೇವೆ ಸಲ್ಲಿಸಿದ್ದ ಶಿವಣ್ಣ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮಾಳೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಆಗುಂಬೆ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಣ್ಣ ಅವರ ಕುಟುಂಬ ಮಾಳೂರಿನಲ್ಲಿರುವ ಇಲಾಖೆ ವಸತಿ ಗೃಹದಲ್ಲಿ ವಾಸವಿತ್ತು.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮೃತರ ಸ್ವಂತ ಜಮೀನಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.