ಶಿವಮೊಗ್ಗ: ನಗರದ ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕಿನ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಆ.16ರ ಭಾನುವಾರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.


ಬ್ಯಾಂಕಿನ ಅಧ್ಯಕ್ಷರಾದ ವೀರಮ್ಮ .ಪಿ ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಆಹ್ವಾನ ಪತ್ರಿಕೆ ತಲುಪದೇ ಇರುವ ಸದಸ್ಯರು ಇದನ್ನೇ ಆಹ್ವಾನ ಪತ್ರಿಕೆ ಎಂದು ಪರಿಗಣಿಸಿ ಸಭೆಯಲ್ಲಿ ಭಾಗವಹಿಸಲು ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕರಾದ ಆರ್ಯಾಂಬ ಡಿ ಕುಂಬ್ಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.