ಶಿವಮೊಗ್ಗ,ಆ.14 ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಡ್ರೋನ್ಗಳ ಮೂಲಕ ಕಣ್ಗಾವಲು ನಡೆಸಲಾಗುತ್ತಿದೆ. ಇನ್ಮುಂದೇ ಡ್ರೋನ್ ಮಹರಾಜನೇ ಕಿಂಗ್!

ಜಿಲ್ಲೆಯ ಸೂಕ್ಷ್ಮ ಪ್ರದೇಶಗಳು, ಪ್ರಮುಖ ವೃತ್ತಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳ ಹಾಗೂ ಕತ್ತಲೆ ಸ್ಥಳಗಳ ಮೇಲೆ ಡ್ರೋನ್ಗಳ ಮೂಲಕ ನಿರಂತರ ನಿಗಾ ಇರಿಸಲಾಗುತ್ತಿದ್ದು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಅಕ್ತಮ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವ ಮೂಲಕ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.


ಮುಂದಿನ ದಿನಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಮಾರಂಭಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಈ ಕಣ್ಗಾವಲು ವ್ಯವಸ್ಥೆಯನ್ನು ಕೈಗೊಂಡಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಆದ್ಯತೆಯಾಗಿದ್ದು, ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಜಿಲ್ಲಾ ಪೋಲೀಸ್ ಇಲಾಖೆ ಮನವಿ ಮಾಡಿದೆ.