ಬೆಂಗಳೂರು: ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷವು ಜು. 15ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸಬೇಕೆಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ.
ಕಳೆದ ವರ್ಷ ಫ್ರೀ ರೆಕಾರ್ಡಿಂಗ್ ಯೂಟ್ಯೂಬ್ ತರಗತಿಗಳನ್ನು ನಡೆಸಲಾಗಿತ್ತು. ಈ ಲಿಂಕ್ಗಳನ್ನು ವಿದ್ಯಾರ್ಥಿಗಳಿಗೆ ವಾಟ್ಸಪ್ ಗ್ರೂಪ್ಗಳ ಮೂಲಕ ಕಳುಹಿಸಲಾಗುತಿತ್ತು.ಈ ಬಾರಿ ಪ್ರತಿ ಕಾಲೇಜಿನ ಉಪನ್ಯಾಸಕರೇ, ಅವರ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಬೇಕು.
ಉಪನ್ಯಾಸಕರು ಕಡ್ಡಾಯವಾಗಿ ಪಾಠಗಳನ್ನು ನಡೆಸಿ, ಹಾಜರಾತಿಯನ್ನು ತೆಗೆದುಕೊಳ್ಳಬೇಕು. ಪ್ರತಿದಿನದ ಹಾಜರಾತಿ ಮಾಹಿತಿಯನ್ನು ಕಾಲೇಜು ಪ್ರಾಂಶುಪಾಲರಿಗೆ ಕಳುಹಿಸಬೇಕು. ಯಾವುದೇ ಕಾಲೇಜಿನಲ್ಲಿ ಉಪನ್ಯಾಸಕರು ಇಲ್ಲದಿದ್ದಲ್ಲಿ, ಈ ವಿದ್ಯಾರ್ಥಿಗಳನ್ನು ಹತ್ತಿರದ ಕಾಲೇಜಿನ ಉಪನ್ಯಾಸಕರ ತರಗತಿಗೆ ಸೇರ್ಪಡೆಯಾಗಬೇಕೆಂದು ಇಲಾಖೆ ತಿಳಿಸಿದೆ.
ಬೆಳಗ್ಗೆ 10.00-11.00ರವರೆಗೆ ಮೊದಲ ಅವಧಿ
ಬೆಳಗ್ಗೆ 11.00- 12.00ರವರೆಗೆ ಎರಡನೇ ಆವಧಿ
12.00- 12:30ರವರೆಗೆ ವಿರಾಮ
12.30- 01:30ರವರೆಗೆ ಮೂರನೇ ಅವಧಿ
01.30 – 02.30ರವರೆಗೆ – ನಾಲ್ಕನೇ ಅವಧಿ