ಬೆಂಗಳೂರು: ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳ? ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ (ಕೆಪಿಸಿಸಿ) ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಚಾರಗಳ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಬೇಕು. ಆದರೆ, ಬಿಜೆಪಿ ಸದಸ್ಯರು ಉದ್ದೇಶಪೂರ್ವಕವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳು ಚರ್ಚೆಯಾಗದಂತೆ

ಮಾಡುತ್ತಿದ್ದಾರೆ. ಬಿಜೆಪಿಯ ಈ ನಡೆಯಿಂದ ಆ ಪಕ್ಷಕ್ಕೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿ?ಯೇ ಹೆಚ್ಚಾಗಿ ಎಂದು ಸಚಿವ ಮಧು ಬಂಗಾರಪ್ಪ ದೂರಿದರು.

ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ನೀತಿ-ನಿರ್ಧಾರಗಳನ್ನು ರೂಪಿಸಲು ವಿಧಾನಮಂಡಲದ ಕಲಾಪ ಅತ್ಯಂತ ಮಹತ್ವದ್ದಾಗಿದೆ. ಆದರೆ, ಪ್ರತಿಪಕ್ಷವು ರಚನಾತ್ಮಕ ಚರ್ಚೆಗೆ ಮುಂದಾಗದೆ ಸದನದ ಕಲಾಪವನ್ನು ಅಡ್ಡಿಪಡಿಸುವುದನ್ನೇ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಯಾವುದೇ ವಿ?ಯದ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದರೂ ಅವಕಾಶ ನೀಡದೆ, ಸದನದ ಘನತೆಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ರಾಜ್ಯದ ಅಭಿವೃದ್ಧಿ, ಶಿಕ್ಷಣ, ರೈತರು, ಯುವಜನರು ಹಾಗೂ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದ ವಿ?ಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷವೂ ಸಹ ಜವಾಬ್ದಾರಿಯುತವಾಗಿ ನಡೆದುಕೊಂಡು ಸದನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.