ಶಿವಮೊಗ್ಗ: ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಸಂಭ್ರಮ, ಸಡಗರದಿಂದ ಆಚರಿಸಿದರು.
ಹೆಣ್ಣುಮಕ್ಕಳು ತಮ್ಮ ಮನೆಯಲ್ಲಿ ಲಕ್ಷ್ಮಿದೇವಿ ಮೂರ್ತಿ ಪ್ರತಿ?ಪಿಸಿ ಪೂಜೆ ಸಲ್ಲಿಸಿದರು. ಹೆಂಗಳೆಯರು, ಮಕ್ಕಳು ಮುಂಜಾನೆಯೇ ಎದ್ದು ಮನೆಯ ಮುಂದೆ ರಂಗೋಲಿ ಹಾಕಿ, ತಳಿರು ತೋರಣ ಕಟ್ಟಿ, ಲಕ್ಷ್ಮೀ ದೇವಿಯ ಸ್ತ್ರೋತ್ರ, ವ್ರತ ಆಚರಣೆ ಮಾಡಿದರು. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಓಲೈಸುವ ಹಬ್ಬ ಎಂದೆ ಪ್ರಸಿದ್ಧಿ ಪಡೆದಿದ್ದು ಎಲ್ಲೆಡೆ ವರಮಹಾಲಕ್ಷ್ಮಿಯ ಹಬ್ಬದ ಸಡಗರ ಕಂಡುಬಂದಿತು.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ವಿಶೇ? ಪೂಜೆ ಕೈಂಕಾರ್ಯ ನಡೆದವು. ಬೆಳಿಗ್ಗೆಯಿಂದಲೇ ಭಕ್ತರು ದೇವಸ್ಥಾನಕ್ಕೆ ತೆಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಿ ದೇವಾಲಯಗಳಲ್ಲಿ ವಿಶೇ? ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ಸರತಿಯಲ್ಲಿ ನಿಂತು ದೇವಿಯ ದರ್ಶನ ಪಡೆದು ವಿಶೇ? ಪೂಜೆ ಸಲ್ಲಿಸಿದರು.

ಖರೀದಿ ಭರಾಟೆ : ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳು ಜನರಿಂದ ತುಂಬಿಕೊಂಡಿದ್ದವು. ಹಬ್ಬದ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿತ್ತು. ಹಬ್ಬಕ್ಕೆ ಬೇಕಾದ ಹೂವು-ಹಣ್ಣುಗಳನ್ನು ಜನರು ಖರೀದಿಸುತ್ತಿದ್ದರು. ಜನರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿತು. ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿತ್ತು. ಹೀಗಿದ್ದರೂ ಕೂಡ ಜನರು ಹಬ್ಬಕ್ಕೆ ಬೇಕಾದ ಹೂ, ಹಣ್ಣು, ಖರೀದಿಸುವಲ್ಲಿ ಜನರು ಮಗ್ನರಾಗಿದ್ದು ಕಂಡು ಬಂತು.
ಗಗನಕ್ಕೇರಿದ ಬೆಲೆ: ಅಗತ್ಯ ವಸ್ತುಗಳ ಬೆಲೆ ಹಿಂದೆಂದಿಗಿಂತಲೂ ಹೆಚ್ಚಾಗಿತ್ತು. ಪೈನಾಪಲ್ ೧೦೦ ರೂ., ಮೂಸುಂಬೆ ಕೆ.ಜಿ.ಗೆ ೮೦-೧೦೦ ರೂ., ಬಾಳೆಹಣ್ಣು ಕೆ.ಜಿ.ಗೆ ೮೦ ರೂ., ಸೇಬು ೨೫೦ ರೂ., ದ್ರಾಕ್ಷಿ ೨೦೦ ರೂ., ಸಪೋಟ ೧೨೦ ರೂ., ದಾಳಿಂಬೆ ೨೦೦ ರೂ., ಸೇವಂತಿಗೆ ಹೂವು

ಒಂದು ಮಾರಿಗೆ ೧೨೦ರೂ, ತಾವರೆ ಹೂವು ಜೊತೆಗೆ ೧೦೦ರೂ., ಮಲ್ಲಿಗೆ ೨೦೦ ರೂ., ಕಾಕಡ ೧೫೦ ರೂ., ಚಂಡು ಹೂವು ೫೦-೮೦ ರೂ., ಬಾಳೆಕಂದು ಜೊತೆಗೆ ೫೦ ರೂ., ಮಾವಿನ ಎಲೆ ಒಂದು ಕಟ್ಟಿಗೆ ೨೦ ರೂ., ಕಬ್ಬು ಒಂದು ಜೊತೆಗೆ ೪೦ ರೂ., ವರೆಗೆ ಮಾರಾಟವಾದವು
ನಗರದ ಗಾಂಧಿ ಬಜಾರ್, ನೆಹರು ರಸ್ತೆ, ಗೋಪಿ ವೃತ್ತ, ಲಕ್ಷ್ಮಿ ಚಿತ್ರಮಂದಿರ ವೃತ್ತ, ಪೊಲೀಸ್ ಚೌಕಿ ಸೇರಿದಂತೆ ಎಲ್ಲೆಡೆ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು. ಹಬ್ಬಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿತು.

ಹಬ್ಬದ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿದ್ದರಿಂದ ಜನಜಂಗುಳಿ ಹೆಚ್ಚಾಗಿತ್ತು. ಸಂಚಾರ ದಟ್ಟಣೆ ಕಂಡುಬಂದಿತು.