ಶಿವಮೊಗ್ಗ, ಆಗಸ್ಟ್ 21 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆ.29 ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.