ಶಿವಮೊಗ್ಗ,ಆ.22:
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಂಯುಕ್ತವಾಗಿ ನಗರದ ಸೈನ್ಸ್ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ʻಕರ್ನಾಟಕ ಪಬ್ಲಿಕ್ ಸ್ಕೂಲ್ʼ ನ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.
ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಎಜಾಕ್ಸ್ ಸಂಸ್ಥೆಯಿಂದ ₹13.50 ಕೋಟಿ ನೆರವು ನೀಡಲಾಗುತ್ತಿದ್ದು, ಆಧುನಿಕ ಹಾಗೂ ಗುಣಮಟ್ಟದ ಮೂಲಸೌಕರ್ಯ ಹೊಂದಿರುವ ಶಾಲೆಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್ ಎಸ್ ಚನ್ನಬಸಪ್ಪ ವಹಿಸಿದ್ದರು. ಬೆಂಗಳೂರಿನ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾದ ಕೆ. ವಿಜಯ್ ಮತ್ತು ಅವರ ಪತ್ನಿ ಕಲ್ಯಾಣಿ ವಿಜಯ್, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಷ್ ಬಾನು, ಡಿ ಎಸ್ ಅರುಣ್, ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ,

ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ನಿಖಿಲ್ ಬಿ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಎಜಾಕ್ಸ್ ಸಂಸ್ಥೆಯ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.