ಕೊಲ್ಲಾಪುರದ ಪ್ರಸಿದ್ಧ ಶ್ರೀ ಕನ್ನೆರಿ ಮಠಕ್ಕೆ ಇಂದು ಮಾನ್ಯ ಮಾಜಿ DCM ಕೆ.ಎಸ್. ಈಶ್ವರಪ್ಪನವರು ಭೇಟಿ ನೀಡಿ, ಕಾಡು ಸಿದ್ದೇಶ್ವರ ಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸ್ವಾಮಿಗಳೊಂದಿಗೆ ಕೆಲಕಾಲ ಆಧ್ಯಾತ್ಮಿಕ ಹಾಗೂ ಸಾಮಾಜಿಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ ಈಶ್ವರಪ್ಪನವರು, ಮಠದ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸ್ವಾಮಿಗಳ ಆಶೀರ್ವಾದ ಪಡೆದು, ಮಠದ ಆಧ್ಯಾತ್ಮಿಕ ವಾತಾವರಣದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಮಠದ ವತಿಯಿಂದ ಈಶ್ವರಪ್ಪನವರಿಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.