ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರ ನೇತೃತ್ವದಲ್ಲಿ ತುಕುಡಿಗಳೊಂದಿಗೆ ಪೊಲೀಸ್ ಪಥಸಂಚಲನ ನಡೆಯಿತು.

ಹಬ್ಬದ ಸಂದರ್ಭದಲ್ಲಿ ನಗರದಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಪ್ರಮುಖ ರಸ್ತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ಪಥಸಂಚಲನ ನಡೆಸಿದರು.

ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.