ಶಿವಮೊಗ್ಗ,ಆ.28:



ಇಲ್ಲಿನ ಮಂಡ್ಲಿ ಬಳಿಯ ಗಜಾನನ ಗ್ಯಾರೇಜ್ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಅರ್ಜುನ್ ಎಂದು ಗುರುತಿಸಲಾಗಿದೆ.

ಅರ್ಜುನ್ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮಂಡ್ಲಿ ವೃತ್ತದ ಮೂಲಕ ಹರಕೆರೆಯಲ್ಲಿರುವ ತಮ್ಮ ಮನೆಗೆ ತೆರಳುತ್ತರುವಾಗ ಗುರುವಾರ ರಾತ್ರಿ ಸುಮಾರು ೧೧.೩೦ರ ವೇಳೆಗೆ ಗಜಾನನ ಗ್ಯಾರೇಜ್ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಅರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತ ಅರ್ಜುನ್ ಅವರು ಪತ್ರಿಕಾ ಕಚೇರಿಯೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
