ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರ 35 ವಾರ್ಡ್ಗಳ ವಾರ್ಡ್ ಹಾಗೂ ಬೂತ್ ಕಾರ್ಯಕರ್ತರ ಸಮಾವೇಶವನ್ನು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಈ. ಕಾಂತೇಶ್ ಅವರ ನೇತೃತ್ವದಲ್ಲಿ ನಗರದ ಜಯಲಕ್ಷ್ಮೀ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಲಾಗಿತ್ತು.

ಸಮಾವೇಶದಲ್ಲಿ ಕರಡು ಮತದಾರರ ಪಟ್ಟಿಯ ವಿಶ್ಲೇಷಣೆ, ಮತದಾರರ ಮಾಹಿತಿ ಹಾಗೂ ಬೂತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತರ ಬಳಗದ ಪ್ರಮುಖರು ಹಾಗೂ ಶಿವಮೊಗ್ಗ ನಗರದ 35 ವಾರ್ಡ್ಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಮತದಾರರ ಪಟ್ಟಿಯ ಕುರಿತು ಸಮಗ್ರ ಮಾಹಿತಿ ಹೊಂದುವುದು ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯದ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಮಾವೇಶ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಕೆ.ಎಸ್. ಈಶ್ವರಪ್ಪ, ಎಂ. ಶಂಕರ್, ರಮೇಶ್ ಬಾಬು, ವಿಶ್ವಾಸ್, ಬಾಲು, ಲತಾ ಗಣೇಶ್, ಲಕ್ಷ್ಮೀ ಶಂಕರ್ ನಾಯ್ಕ್, ಅನಿತಾ, ಮೋಹನ್, ಗುರುಶೇಟ್, ಶಿವಾಜಿ, ಶಿರಿಷ್ ಸೇರಿದಂತೆ ರಾಷ್ಟ್ರಭಕ್ತರ ಬಳಗದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.