ಶಿವಮೊಗ್ಗ: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ @ ಕಲ್ಲೇಶ ಆರೋಪಿಯಾಗಿದ್ದನು. ಪ್ರಕರಣದ ವಿಚಾರಣೆಗೆ ಹಾಜರಾಗದೆ ಪೊಲೀಸರ ಕೈಗೆ ಸಿಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಕೂಡ ಜಾರಿಯಾಗಿತ್ತು.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಕೊನೆಗೂ ಆತನನ್ನು ಪತ್ತೆಹಚ್ಚಿ ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವರ್ಷಗಳ ಕಾಲ ಬಾಕಿ ಉಳಿದಿದ್ದ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಯಶಸ್ವಿಯಾಗಿದೆ.