ಶಿವಮೊಗ್ಗ, ಸೆ.3:
ರಾಷ್ಟ್ರ ಭಕ್ತ ಬಳಗದ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಯುವ ನಾಯಕ ಕೆ.ಇ. ಕಾಂತೇಶ್ ಅವರ ನೇತೃತ್ವದಲ್ಲಿ ಕಲ್ಲಹಳ್ಳಿ ವಾರ್ಡ್ 07ರ ಬೂತ್ ನಂ.97ರ ಕೆ.ಹೆಚ್.ಬಿ. ಕಾಲೋನಿಯಲ್ಲಿ ಎಸ್ಐಆರ್ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮನೆ–ಮನೆ ಭೇಟಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಮನೆ–ಮನೆಗೆ ತೆರಳಿದ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಇ. ಕಾಂತೇಶ್ ಅವರ ನೇತೃತ್ವದ ತಂಡವು ಮತದಾರರನ್ನು ಭೇಟಿ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಧೃಡಪಡಿಸಿತು. ಹೆಸರು, ವಿಳಾಸ ಸೇರಿದಂತೆ ಮತದಾರರ ವಿವರಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ನೀಡಲಾಯಿತು.

ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ, ಯಾವುದೇ ತಿದ್ದುಪಡಿ ಅಥವಾ ಸೇರ್ಪಡೆ ಅಗತ್ಯವಿದ್ದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಕಾಂತ್, ಬಕೆಟ್ ಮಂಜುನಾಥ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಾಲು, ವಾರ್ಡ್ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಮಂಜಣ್ಣ, ಮಹಿಳಾ ಅಧ್ಯಕ್ಷೆ ಸೌಭಾಗ್ಯ, ನಾಗವೇಣಿ, ಕುಬೇರಪ್ಪ, ರಾಜಣ್ಣ, ಭಾಸ್ಕರ್, ಶೇಖರ್ ಹಾಗೂ ಶ್ರೀಧರ್ ಮೂರ್ತಿ ಸೇರಿದಂತೆ ರಾಷ್ಟ್ರ ಭಕ್ತ ಬಳಗದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.