ಶಿವಮೊಗ್ಗ: ಕಲ್ಲೂರು ಮಂಡ್ಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರಿಯಮ್ಮ ದೇವಿಯ ದೇವಾಲಯದ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮವು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ರಾಷ್ಟ್ರ ಭಕ್ತರ ಬಳಗದ ಯುವ ನಾಯಕ ಕೆ.ಇ. ಕಾಂತೇಶ್ ಅವರು ಭಾಗವಹಿಸಿ ಶ್ರೀ ಮಾರಿಯಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ತುಂಗಾ ತರಂಗ ಪತ್ರಿಕೆಯ ಸಂಪಾದಕರಾದ ಎಸ್.ಕೆ. ಗಜೇಂದ್ರಸ್ವಾಮಿ ಸೇರಿದಂತೆ ಭಕ್ತರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.