ಬೆಂಗಳೂರು: ಬರುವ ಜು. 21ರಂದು ನಡೆಯಲಿರುವ ಬಕ್ರೀದ್ ಹಬ್ಬ ಆಚರಣೆಯ ವೇಳೆ ಮಸೀದಿಗಳಲ್ಲಿ ಒಮ್ಮೆಗೆ 50 ಜನರು ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಆದೇಶ ಹೊರಡಿಸಿದೆ.
ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಮಾಜ್ ಮಾಡುವಾಗ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು.
ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನ ಪರೀಕ್ಷಿಸಬೇಕು. ಕೈಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.