ಶಿವಮೊಗ್ಗ: ನಗರದ ಕೋಟೆ ರಸ್ತೆಯ ವಾಸವಿ ಶಾಲಾ ಆವರಣದಲ್ಲಿ ಗೋವರ್ಧನ ಟ್ರಸ್ಟ್, ವಾಸವಿ ವಿದ್ಯಾಲಯ, ಇಸ್ಕಾನ್ ಹಾಗೂ ಬಾಲಗೋಕುಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಇ. ಕಾಂತೇಶ್ ಅವರ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಮಡಿಕೆ ಒಡೆಯುವ ಮೂಲಕ ಚಾಲನೆ ನೀಡಲಾಯಿತು.

ಶ್ರೀಕೃಷ್ಣನ ಬಾಲಲೀಲೆ ಹಾಗೂ ಭಾರತೀಯ ಸಂಸ್ಕೃತಿ–ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಡಿಕೆ ಒಡೆಯುವ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮವನ್ನು ಹೆಚ್ಚಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯನ್ನೂ ಆಚರಿಸಿ, ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸುವ ಶಿಕ್ಷಕರ ಸೇವೆ ಮತ್ತು ಕೊಡುಗೆಯನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ.ಎಸ್. ಈಶ್ವರಪ್ಪ, ಕೆ.ಇ. ಕಾಂತೇಶ್, ರಂಗನಾಥ್, ಸತ್ಯನಾರಾಯಣ್, ಶೇಷಾಚಲ, ಉಮೇಶ್ ಆರಾಧ್ಯ, ವಿಶ್ವಚಾರ್, ಶ್ಯಾಮ್ ಸುಂದರ್, ಉಮಾಮೂರ್ತಿ, ಶುಭಾ ರಾಘವೇಂದ್ರ ಸೇರಿದಂತೆ ಗೋವರ್ಧನ ಟ್ರಸ್ಟ್ನ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು

.
ವಾಸವಿ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವಾತಾವರಣದೊಂದಿಗೆ ಗಮನ ಸೆಳೆಯಿತು.