ಶಿವಮೊಗ್ಗ, ಸೆ, 07): ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಯೋಗಾತ್ಮಕವಾಗಿ ನೀರನ್ನು ಹರಿಸಲು ಸರ್ಕಾರ ಆದೇಶಿಸಿದೆ.
ನೀರು ಬಿಡುಗಡೆ ದಿನಾಂಕ: ಸೆಪ್ಟೆಂಬರ್ 06 ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಿಂದ ಆರಂಭವಾಗಿ 0.00 ಕಿ.ಮೀ ನಿಂದ 114.142 ಕಿ.ಮೀ ವರೆಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ, ಕಡೂರು ತಾಲೂಕುಗಳು,

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕುಗಳ ಮೂಲಕ ಗೋನೂರು ಕೆರೆಯವರೆಗೆ ನೀರು ತಲುಪಲಿದೆ.

ಸಾರ್ವಜನಿಕರಿಗೆ ಸುರಕ್ಷತಾ ಸೂಚನೆಗಳು:
ಕಾಲುವೆ ಮತ್ತು ಹಳ್ಳಗಳ ದಂಡೆಯಲ್ಲಿ ಸಾರ್ವಜನಿಕರು ಸಂಚರಿಸುವುದು, ಈಜುವುದು ಹಾಗೂ ಜಾನುವಾರುಗಳನ್ನು ಕಾಲುವೆಗೆ ಇಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾಲುವೆ ಕಟ್ಟೆಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರು ಎತ್ತುವುದು ಕಾನೂನುಬಾಹಿರವಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.