ಶಿವಮೊಗ್ಗ : ಸೆಪ್ಟಂಬರ್ ೦೭ :: ಕರ್ನಾಟಕ ಪಬ್ಲಿಕ್ಶಾಲೆಗಳ ಉದ್ಘಾಟನೆ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಕೋಟ್ಯಾಂತರ ರೂ.ಗಳ ವೆಚ್ಚದ ಯೋಜನೆಗಳ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಕೇಂದ್ರದಲ್ಲಿಯೇ ಆಯೋಜಿಸಲು ಉದ್ದೇಶಿಸಿದ್ದು, ಮಾನ್ಯ ಮುಖ್ಯಮಂತ್ರಿಗಳ ದಿನಾಂಕ ನಿಗಧಿಯ ನಂತರ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ನಗರದ ತಮ್ಮ ಆಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಕೆ.ಪಿ.ಎಸ್.ಶಾಲೆಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದ ಅವಧಿಯಲ್ಲಿಯೂ ರಾಜ್ಯದೆಲ್ಲೆಡೆ ಕೆ.ಪಿ.ಎಸ್.ಶಾಲೆಗೆ ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಮಕ್ಕಳ ದಾಖಲಾತಿ ಕಂಡುಬಂದಿದೆ. ಈ ಹಿಂದೆ ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೆ.ಪಿ.ಎಸ್.ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಡಿ.ಪಿ.ಆರ್.ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರತಿ ಕೆ.ಪಿ.ಎಸ್ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ೩-೯ಕೋಟಿ ರೂ.ಗಳ ವ್ಯಯ ಮಾಡಲಾಗುವುದು ಅಲ್ಲದೇ ಶಾಲಾ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾಗಿರುವ ಪಠ್ಯ, ಕ್ರೀಡೆ, ಸಂಗೀತ ಸೇರಿದಂತೆ ಎಲ್ಲಾ ಶಿಕ್ಷಕರನ್ನು ನೇಮಿಸಲಾಗುವುದು. ಅಂತೆಯೇ ಶಾಲಾ ಮಕ್ಕಳಿಗೆ ಬಸ್ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಪ್ರಸ್ತುತ ಪಶ್ಚಿಮ ಘಟ್ಟ ಪ್ರದೇಶ ನಿವಾಸಿಗಳ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿರಂಗನ್ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನರಲ್ಲಿ ತೀವ್ರ ತರಹದ ವಿರೋಧವಿದೆ. ಈ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಕಸ್ತೂರಿ ರಂಗನ್ವರದಿಯಿಂದ ಬಾದಿತಗೊಳ್ಳುವ ಜಿಲ್ಲೆಗಳ ಜನಪ್ರತಿನಿಧಿಗಳು, ಹೋರಾಟಗಾರರು, ತಜ್ಞರು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಿ, ರಾಜ್ಯದ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುವುದು ಎಂದರು.
ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಈ ಸಂಬಂಧ ಕೆಲವು ಆಯ್ದ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದ ಅವರು, ಸೆಪ್ಟಂಬರ್೨೧, ೨೨ ಮತ್ತು ೨೩ರಂದು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲು ಉದ್ದೇಶಿಸಲಾಗಿದ್ದು, ಈ ವಿಶೇಷ ಹಾಗೂ ಐತಿಹಾಸಿಕ ಅಧಿವೇಶನದಲ್ಲಿ ಅರಣ್ಯ ಸಂಬಂಧಿಸಿದ ಸಮಸ್ಯೆ-ಸವಾಲುಗಳು, ಪರಿಹಾರ ಕ್ರಮಗಳು, ಕಸ್ತೂರಿ ರಂಗನ್ವರದಿ, ಸಂತ್ರಸ್ಥರ ನೆಮ್ಮದಿಯ ಬದುಕಿಗೆ ಕ್ರಮ, ನೆರೆ-ಬರ ಇಂತಹ ಮಹತ್ವದ ಸಂಗತಿಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ವಿಪಕ್ಷಗಳು ಸದ್ವಿಚಾರದೊಂದಿಗೆ ಚರ್ಚೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಸಮಾಜಕ್ಕೆ ನೀಡುವ ನಿಸ್ವಾರ್ಥ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ ವೈದ್ಯರಿಗೆ ’ಆಡಿ.’ ಹಾಗೂ ಪ್ರಾಧ್ಯಾಪಕರಿಗೆ ’Pಡಿoಜಿ.’ ಎಂದು ಕರೆಯುವಂತೆ ಸುಮಾರು ೪.೫ ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ’ಖಿಡಿ.’ (ಖಿeಚಿಛಿheಡಿ – ಟೀಚರ್) ಎಂಬ ಗೌರವಸೂಚಕ ಪೂರ್ವಪ್ರತ್ಯಯವನ್ನು ಬಳಸಲು ಅಧಿಕೃತ ಅನುಮತಿ ನೀಡಿ ಗೌರವಿಸಿದೆ ಎಂದರು.
ಜನರ ಸೇವೆಯೇ ಜನಾರ್ದನ ಸೇವೆ ಎಂಬ ತತ್ವದಲ್ಲಿ ಅದಮ್ಯ ವಿಶ್ವಾಸ ಇಟ್ಟುಕೊಂಡಿರುವ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು, ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರ್ಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು, ಅವರ ದುಃಖ-ದುಮ್ಮಾನ, ದೂರು, ನೋವುಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನವನ್ನೇ ಆರಂಭಿಸಿದ್ದು, ರಾಜ್ಯದ ಜನತೆಯಲ್ಲಿ ಹೊಸ ಆಶಾಕಿರಣ ಮೂಡಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಹಾಗಾಗಿ ರಾಜ್ಯದ ಜನತೆಯ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ಪ್ರಜಾಸೇವಾ ಇಲಾಖೆ ರಚಿಸಿ, ಸರ್ಕಾರ ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಹೊಸ ಸೆಕೆ ಆರಂಭಿಸುವ ಮೂಲಕ ರಾಜ್ಯದ ಪ್ರಜೆಗಳಲ್ಲಿ ಹೊಸ ಹುರುಪು ತುಂಬಿದ್ದು, ರಾಜ್ಯದ ಪ್ರತಿಯೊಬ್ಬರೂ ಸರ್ಕಾರದತ್ತ ತಿರುಗಿ ನೋಡುವಂತಾಗಿದೆ.

ಸೆಪ್ಟಂಬರ್ ರಂದು ಬೆಳಿಗ್ಗೆ ೯.೩೦ಕ್ಕೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಸುವರ್ಣ ಸಂಸ್ಕೃತಿ ಭವನದಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ. ಸ್ಥಳದಲಿಯೇ ಜನರ ಅಹವಾಲುಗಳನ್ನು ಆಲಿಸಿ, ಅವರ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಪ್ರಜಾಸೇವಾ ಆಂದೋಲನ ಸಭೆಯನ್ನು ಆಯೋಜಿಸಲಾಗಿದೆ ಎಂದರು.
ಯುವ ಜನತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಆಸಕ್ತಿ ಮೂಡಿಸುವುದು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್ಮಟ್ಟದಲ್ಲಿ ಯುವಕರ ಸಬಲೀಕರಣಕ್ಕಾಗಿ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ ಎಂದರು.
ಶಿವಮೊಗ್ಗ ಜಿಲ್ಲೆಯ ೩೫೬ ಭಾರತ್ಜೋಡೋ ಸಂಘಗಳ ಸಂಘಗಳು ರಚನೆಯಾಗಿದ್ದು, ೩೬೦೦೦ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದ ಅವರು, ಸಂಘಗಳ ರಚನೆಯಲ್ಲಿ ತುಮಕೂರು, ಮೈಸೂರು ನಂತರ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದವರು.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಶಾಲಾ ದಾಖಲಾತಿಯಲ್ಲಿ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಪ್ರಮಾಣದ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್ಒದಗಿಸಲು ರಾಜ್ಯಮಟ್ಟದಲ್ಲಿ ಟೆಂಡರ್ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ವರ್ಷದಿಂದಲೇ ಉಚಿತ ನೋಟ್ಪುಸ್ತಕವನ್ನು ವಿತರಿಸಲಾಗುತ್ತಿದೆ ಎಂದರು. ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸದುದ್ದೇಶದಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಆಯನೂರು ಮಂಜುನಾಥ್, ಯೋಗೀಶ್, ಚೇತನ್ಗೌಡ, ರಮೇಶ್, ರವಿಕುಮಾರ್, ಜಿ.ಡಿ.ಮಂಜುನಾಥ್ಮತ್ತಿತರರು ಉಪಸ್ಥಿತರಿದ್ದರು.