ಶಿವಮೊಗ್ಗ, ಸೆ, 07
ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 01 ಮಹಿಳಾ ವೈದ್ಯರ ಹುದ್ದೆಯನ್ನು ತಾತ್ಕಾಲಿಕ/ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 19-09-2026 ರೊಳಗಾಗಿ ‘ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾಂದ್ರಿ, ಶಂಕರಘಟ್ಟ – 577451, ಶಿವಮೊಗ್ಗ ಜಿಲ್ಲೆ’ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ನಮೂನೆ, ಅರ್ಹತೆಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.kuvempu.ac.in ಗೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.