ಶಿವಮೊಗ್ಗ, ಸೆ.08 : ಭದ್ರಾವತಿ ನಗರದ ತರೀಕೆರೆ ರಸ್ತೆ ಪ್ರದೇಶದಲ್ಲಿ ಸೆಪ್ಟೆಂಬರ್ 07 ರಂದು ಕಾರ್ಮಿಕ, ಆರೋಗ್ಯ, ಸಮಾಜ ಕಲ್ಯಾಣ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆಗಳು ಮತ್ತು ಮಕ್ಕಳ ಸಹಾಯವಾಣಿಯ ಸಹಯೋಗದೊಂದಿಗೆ ಬಾಲ ಹಾಗೂ ಕಿಶೋರ ಕಾರ್ಮಿಕರ

ನಿಯಂತ್ರಣಕ್ಕಾಗಿ ಅನಿರೀಕ್ಷಿತ ದಾಳಿ ಮತ್ತು ತಪಾಸಣೆ ಕೈಗೊಳ್ಳಲಾಯಿತು. ಈ ಕಾರ್ಯಾಚರಣೆಯ ವೇಳೆಯಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದ್ದು, ಅಧಿಕಾರಿಗಳ ತಂಡವು ತಕ್ಷಣವೇ ಆ ಮಕ್ಕಳನ್ನು ಕೆಲಸದ ಸ್ಥಳದಿಂದ ರಕ್ಷಿಸಿ

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದೆ. ಅಲ್ಲದೆ, ಸಂಬಂಧಪಟ್ಟ ಸಂಸ್ಥೆಯ ಮಾಲೀಕರಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಜಾಗೃತಿ ಮೂಡಿಸಲಾಯಿತು.

ಈ ವೇಳೆ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ತಾಲ್ಲೂಕು ಅರೋಗ್ಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಜರಿದ್ದರು..