ಶಿವಮೊಗ್ಗ.ಸೆ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.10 ಮತ್ತು 11 ರಂದು ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸೆ.10 ರ ಬೆಳಿಗ್ಗೆ 10.30 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ನೆರವೇರಿಸುವರು. ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ, ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ

ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉಪಸ್ಥಿತಿ ಇರಲಿದ್ದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳಾದ ಆರಗ ಜ್ಞಾನೇಂದ್ರ, ಬಿ.ವೈ.

ವಿಜಯೇಂದ್ರ, ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ., ಕರ್ನಾಟಕ ರಾಜ್ಯ ಪ.ಜಾ.ಮತ್ತು ಪ.ಪಂ.ಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ., ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಹೆಚ್.ಎಸ್.ಸುಂದರೇಶ್, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಅಂಶುಮತ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಅಪರ ಜಿಲ್ಲಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಇತರರು ಪಾಲ್ಗೊಳ್ಳುವರು.