ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತಳನ್ನು ಶಿಕಾರಿಪುರದ ನಮಿತಾ (21) ಎಂದು ಗುರುತಿಸಲಾಗಿದೆ. ಕಾಲೇಜು ಸಮವಸ್ತ್ರದಲ್ಲಿಯೇ ಆಕೆ ಕೆರೆಗೆ ಬಿದ್ದಿರುವುದು ಪತ್ತೆಯಾಗಿದೆ.

ಇತ್ತೀಚೆಗೆ ಬಿಸಿಎ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಒಂದು ಸೆಮಿಸ್ಟರ್ನಲ್ಲಿ ನಮಿತಾ ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಕುರಿತು ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.