ಶಿವಮೊಗ್ಗ, ಸೆ.೧೦:
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಕುತೂಹಲಕ್ಕೆ ಸತೆರೆ ಬಿದ್ದಿದ್ದು, ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ. ಯೋಗೇಶ್ ಅವರನ್ನು ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಈ ಸಂಬಂಧ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಘಟಾನುಘಟಿ ನಾಯಕರ ಮಧ್ಯೆ ಪೈಪೋಟಿ ಇತ್ತು. ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ಜಿಲ್ಲಾ ಅಧ್ಯಕ್ಷ ರುಗಳು ರೇಸ್ನಲ್ಲಿದ್ದರು.

ಇವುಗಳ ನಡುವೆ ಯುವ ನಾಯಕ ಹೆಚ್.ಸಿ. ಯೋಗೇಶ್ಗೆ ಹೈಕಮಾಂಡ್ ಜವಾಬ್ದಾರಿ ನೀಡಿದೆ.
ಸಂಘಟನ್ ಸೃಜನ್ ಅಭಿಯಾನದ ಅಡಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು. ಎಐಸಿಸಿ ಮತ್ತು ಕೆಪಿಸಿಸಿಯ ವೀಕ್ಷಕರು ಜಿಲ್ಲೆಗಳಿಗೆ ಭೇಟಿ ನೀಡಿದ್ದರು.

ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದರು. ಇನ್ನು, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಅವಕಾಶವಿತ್ತು. ಇವುಗಳನ್ನು ಪರಿಶೀಲಿಸಿ ಟಾಪ್ ೬ ಮಂದಿಯ ಹೆಸರನ್ನು ಪಕ್ಷದ ಪದಾಧಿಕಾರಿಗಳಿಗೆ ವೀಕ್ಷಕರು ಲಕೋಟೆಯಲ್ಲಿ ಸಲ್ಲಿಸಿದ್ದರು. ಇದರ ಆಧಾರದಲ್ಲಿ ಪರಿಶೀಲನೆ ನಡೆಸಿ ಕೊನೆಗೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆಸಲಾಗಿದೆ.
ಯೋಗೇಶ್ ಅವರಿಗೆ ಸಿಕ್ಕ ಜವಾಬ್ಧಾರಿಯನ್ನು ಸಮರ್ಥವಾಗಿ ನಿಭಾಯಿಸುವ, ಎಲ್ಲರೊಡನೆ ಪಕ್ಷ ಬೆಳೆಸುವ ಜವಾಬ್ದಾರಿ ಇದೆ, ಗುಂಪುಗಳಾಗದಿರಲಿ ಎಂಬುದು ಕಾಂಗ್ರೆಸ್ ಕಟ್ಟಾಳುಗಳ ಮನದ ಮಾತು…