ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ರಾಷ್ಟ್ರೀಯ ಇಂಜಿನಿಯರಿಂಗ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂತರಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ

10 ನೇ ತರಗತಿ ವಿದ್ಯಾರ್ಥಿನಿಯರಾದ ಗೌರಿ ಎಚ್.ಆರ್. ಮತ್ತು ಪ್ರಣತಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿಜೇತರಿಗೆ ಶಾಸಕರಾದ ಚೆನ್ನಬಸಪ್ಪ ಅವರು ಬಹುಮಾನ ವಿತರಿಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ

ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ ಅವರು ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ನವೀನಾ ಎಂ. ಪಾಯಸ್, ಉಪಪ್ರಾಂಶುಪಾಲರಾದ ರಂಗನಾಥ್ ಎಸ್.ಡಿ. ಹಾಗೂ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.