ಶಿವಮೊಗ್ಗ, ಸೆ, 21;: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 24-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
—
with warm regards