ಶಿವಮೊಗ್ಗ ಸೆ. 21; : ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.23 ರಂದು ವಿದ್ಯುತ್ ಪರಿವರ್ತಕ ಕೇಂದ್ರದ ಕಾಮಗಾರಿ ಹಮ್ಮಿಕೊಂಡಿದ್ದು,

ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ಕಾಮತ್ ಲೇಔಟ್,

ತುಂಗಾನಗರ ಹಿಂಭಾಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.