ಶಿವಮೊಗ್ಗ ,ಸೆ, ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಬುಧವಾರ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವೃಂದದೊಂದಿಗೆ ನಗರದ ನ್ಯಾಯಾಲಯಕ್ಕೆ ಭೇಟಿ ನೀಡಿ ಕಲಾಪಗಳನ್ನು ವೀಕ್ಷಿಸಿದರು.
ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ. ಅವರ ಪೂರ್ವಾನುಮತಿ ಪಡೆದು ಈ ಭೇಟಿಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ಜಿ.ಎ. ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ ಎಂ.ಎಸ್. ಅವರು ವಿದ್ಯಾರ್ಥಿನಿಯರೊಂದಿಗೆ ನೇರ ಸಂವಾದ ನಡೆಸಿದರು.

ಸಂವಾದದಲ್ಲಿ ನ್ಯಾಯಾಲಯದ ಕಾರ್ಯಕಲಾಪಗಳು, ಕಾನೂನಿನ ಮಹತ್ವ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ದೊರೆಯುವ ಉಚಿತ ಕಾನೂನು ನೆರವು ಹಾಗೂ ಸೇವೆಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ನಂತರ ವಿದ್ಯಾರ್ಥಿನಿಯರಿಗೆ ನ್ಯಾಯಾಲಯದ ಕಲಾಪಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಲು ಅನುವು ಮಾಡಿಕೊಡಲಾಯಿತು.
ಈ ಶೈಕ್ಷಣಿಕ ಭೇಟಿಯಲ್ಲಿ ಕಮಲಾ ನೆಹರು ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ.ಆರ್., ಯುವ ರೆಡ್ ಕ್ರಾಸ್ ಘಟಕದ

ಸಂಯೋಜನಾಧಿಕಾರಿ ಮಮತಾ ಪಿ.ಎನ್., ರಾಜ್ಯಶಾಸ್ತ್ರ ವಿಭಾಗದ ನೇತ್ರಾವತಿ ಹಾಗೂ ತಿಮ್ಮೇಶ್ ಹೆಚ್.ಆರ್., ಅರ್ಥಶಾಸ್ತ್ರ ವಿಭಾಗದ ಸ್ವಾತಿ ಕೆ.ಇ., ಮತ್ತು ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಅರ್ಪಿತಾ ಅವರ ಮಾರ್ಗದರ್ಶನದಲ್ಲಿ ಒಟ್ಟು 49 ವಿದ್ಯಾರ್ಥಿನಿಯರು ಭಾಗವಹಿಸಿ ನ್ಯಾಯಾಲಯದ ಪ್ರಕ್ರಿಯೆಗಳ ಅನುಭವ ಪಡೆದರು.