ಶಿವಮೊಗ್ಗ,ಸೆ.23: ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಿಷಿ ಆನಂದ್ ರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಿಷಿ ಆನಂದ್ ವಿಜಯಪುರದ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ತಕ್ಷಣವೇ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಅಧಿಕಾರ ವಹಿಸಿಕೊಳ್ಳಲು ಇಲಾಖೆ ಆದೇಶಿಸಿದೆ.

ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆಯಾಗಿದ್ದು, ಅಲ್ಲಿನ ಹೆಸ್ಕಾಂ ಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಎನ್. ಹೇಮಂತ್ ಜಿಲ್ಲಾ ಪಂಚಾಯತ್ ಸಿಇಓ ಆಗಿ ಮಾತ್ರವಲ್ಲದೆ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ನಿAದ ನಡೆಯುವ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿಯು ಇದೆ.
=